ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್, ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲದ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಿಷೇಧಾಜ್ಞೆ ಜಾರಿ
ಪರಿಸ್ಥಿತಿ ಕೈಮೀರದಂತೆ ತಡೆಯಲು ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್, ಅವರು ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಇನ್ನೊಂದೆಡೆ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ಬಂಧನ ವಿಳಂಬವಾದರೆ ಬಾಗಲಕೋಟೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

