Apr 17, 2026 ,

Stay in the loop

Subscribe to the newsletter for all the latest updates

Error: Contact form not found.

ಮಣಿಪುರ, ಮೇಘಾಲಯ, ಮಿಜೋರಾಂ

Table of Content

ಕರ್ನಾಟಕ ಸೇರಿದಂತೆ ದೇಶದ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂಬರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಕೆಲಸಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗವು ಆಯಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ವಿಶೇಷ ಪರಿಷ್ಕರಣೆ ಕಾರ್ಯವು ಈ ವರ್ಷದ ಏಪ್ರಿಲ್‌ನಿಂದ ಆರಂಭವಾಗುವ ನಿರೀಕ್ಷೆಯಿದ್ದು, ಅದಕ್ಕೂ ಮುನ್ನ ಮಾಡಬೇಕಾದ ಪ್ರಾಥಮಿಕ ಸಿದ್ಧತೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಆಯೋಗವು ನಿರ್ದೇಶಿಸಿದೆ.
ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪಂಜಾಬ್, ಸಿಕ್ಕಿಂ, ತ್ರಿಪುರಾ, ತೆಲಂಗಾಣ, ಉತ್ತರಾಖಂಡ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ದೆಹಲಿ ಈ ಪಟ್ಟಿಯಲ್ಲಿವೆ.
ದೇಶದ ಇತರ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ ಮತ್ತು ಮೃತಪಟ್ಟ ಅಥವಾ ವಿಳಾಸ ಬದಲಿಸಿದ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಈ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ.

Leave a Reply

Your email address will not be published. Required fields are marked *

Featured Posts

Featured Posts

Lastest News

Featured Posts