ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪಂಜಾಬ್, ಸಿಕ್ಕಿಂ, ತ್ರಿಪುರಾ, ತೆಲಂಗಾಣ, ಉತ್ತರಾಖಂಡ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ದೆಹಲಿ ಈ ಪಟ್ಟಿಯಲ್ಲಿವೆ.
ದೇಶದ ಇತರ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ ಮತ್ತು ಮೃತಪಟ್ಟ ಅಥವಾ ವಿಳಾಸ ಬದಲಿಸಿದ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಈ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ.

