ಕರ್ನಾಟಕ ಸೇರಿದಂತೆ ದೇಶದ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂಬರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಕೆಲಸಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗವು ಆಯಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ವಿಶೇಷ ಪರಿಷ್ಕರಣೆ ಕಾರ್ಯವು ಈ ವರ್ಷದ ಏಪ್ರಿಲ್‌ನಿಂದ ಆರಂಭವಾಗುವ ನಿರೀಕ್ಷೆಯಿದ್ದು, ಅದಕ್ಕೂ ಮುನ್ನ ಮಾಡಬೇಕಾದ ಪ್ರಾಥಮಿಕ ಸಿದ್ಧತೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಆಯೋಗವು ನಿರ್ದೇಶಿಸಿದೆ.

