Apr 19, 2026 ,

Stay in the loop

Subscribe to the newsletter for all the latest updates

Error: Contact form not found.

ತೂರಾಟದ ಬೆನ್ನಲ್ಲೇ ಕಿಡಿಗೇಡಿಗಳು

Table of Content

ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ವಹಿಸಿದೆ.
ಶಿವಾಜಿ ಜಯಂತಿ ಮೆರವಣಿಗೆಯು ಕಿಲ್ಲಾ ಓಣಿಯ ಮಸೀದಿ ಬಳಿ ಸಾಗುತ್ತಿದ್ದಾಗ ಹಠಾತ್ತನೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮೆರವಣಿಗೆಯಲ್ಲಿದ್ದ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಪೊಲೀಸ್‌ ಅಧಿಕಾರಿ ಸೇರಿದಂತೆ ಕೆಲ ಸಾರ್ವಜನಿಕರಿಗೂ ಗಾಯಗಳಾಗಿವೆ.
ಕಲ್ಲು ತೂರಾಟದ ಬೆನ್ನಲ್ಲೇ ಕಿಡಿಗೇಡಿಗಳು ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮ ತಳ್ಳುಗಾಡಿಯಲ್ಲಿದ್ದ ಚಿಲ್ಲರೆ ಹಣ, ತಕ್ಕಡಿ ಎಲ್ಲವೂ ಸುಟ್ಟು ಭಸ್ಮವಾಗಿವೆ. ಬಡವರ ಹೊಟ್ಟೆ ಮೇಲೆ ಹೊಡೆದರೆ ಜೀವನ ಮಾಡುವುದು ಹೇಗೆ? ಎಂದು ಸಂತ್ರಸ್ತ ವ್ಯಾಪಾರಿ ಜನ್ನತಬಿ ದೊಡ್ಡಮನಿ ಅಳಲು ತೋಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Featured Posts

Featured Posts

Lastest News

Featured Posts